Revelation 14:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದ್ರಾಕ್ಷಿಯನ್ನು ನಗರದ ಹೊರಭಾಗದಲ್ಲಿದ್ದ ದ್ರಾಕ್ಷಿಯ ಆಲೆಯಲ್ಲಿ ಕಿವುಚಿ ಹಾಕಿದರು. ಆ ದ್ರಾಕ್ಷಿಯ ಆಲೆಯಿಂದ ರಕ್ತವು ಹೊರಕ್ಕೆ ಬಂದಿತು. ಅದು ಕುದುರೆಗಳ ತಲೆಗಳಷ್ಟು ಎತ್ತರಕ್ಕೆ ಏರಿ ಇನ್ನೂರು ಮೈಲಿಗಳಷ್ಟು ದೂರ ಹರಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.
Kannada BSI Bible 2016
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಪಟ್ಟಣದ ಹೊರಗೆ ಆ ತೊಟ್ಟಿಯಲ್ಲಿ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಆಳವಾಗಿ ಇನ್ನೂರು ಮೈಲಿ ದೂರ ಹರಿಯಿತು.
Kannada Bible (KNCL) BSI 2016
ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು.