Revelation 14:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.
Kannada BSI Bible 2016
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಿಹೋಗುವದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ ಕುಲ ಪ್ರಜೆಗಳವರಿಗೂ ಸಕಲ ಭಾಷೆಗಳನ್ನಾಡುವವರಿಗೂ ಸಾರಿಹೇಳುವದಕ್ಕೆ ನಿತ್ಯವಾದ ಶುಭವರ್ತಮಾನವು ಅವನಲ್ಲಿತ್ತು.
Kannada Bible (KNCL) BSI 2016
ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.