Revelation 14:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
Kannada BSI Bible 2016
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾ ನಗರಿಯು ಬಿದ್ದಳು. ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು ಎಂದು ಹೇಳಿದನು.
Kannada Bible (KNCL) BSI 2016
ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.