Revelation 14:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,
Kannada BSI Bible 2016
ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ
Kannada Bible (KNCL) BSI 2016
ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,