Revelation 15:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವ ಗಳಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.
Kannada BSI Bible 2016
ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.
Kannada Bible (KNCL) BSI 2016
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.