Revelation 15:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.
Kannada BSI Bible 2016
ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು
Kannada Bible (KNCL) BSI 2016
ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,