Revelation 15:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
Kannada BSI Bible 2016
ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
Kannada Bible (KNCL) BSI 2016
ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.