Revelation 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.
Kannada BSI Bible 2016
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.
Kannada Bible (KNCL) BSI 2016
ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.