Revelation 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಆ ಮೃಗದ ಸಿಂಹಾಸನದ ಮೇಲೆ ಸುರಿದನು. ಮೃಗದ ರಾಜ್ಯದಲ್ಲಿ ಅಂಧಕಾರವು ಕವಿಯಿತು. ಜನರು ನೋವಿನಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
Kannada BSI Bible 2016
ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಐದನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಹೊಯ್ಯಲು ಅದರ ರಾಜ್ಯವು ಕತ್ತಲಾಯಿತು. ಜನರು ತಮಗಾದ ಕಷ್ಟದ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
Kannada Bible (KNCL) BSI 2016
ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು, ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,