Revelation 16:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.
Kannada BSI Bible 2016
ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು.
Kannada Bible (KNCL) BSI 2016
ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.