Revelation 16:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.
Kannada BSI Bible 2016
ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು.
Kannada Bible (KNCL) BSI 2016
ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.