Revelation 16:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳನ್ನು ನಾನು ನೋಡಿದೆನು. ಅವು ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಹೊರಗೆ ಬಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
Kannada BSI Bible 2016
ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಘಟಸರ್ಪ ಮೃಗ ಸುಳ್ಳುಪ್ರವಾದಿ ಇವರ ಬಾಯಿಗಳಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವದನ್ನು ಕಂಡೆನು.
Kannada Bible (KNCL) BSI 2016
ಇವುಗಳಾದ ಮೇಲೆ ಕಪ್ಪೆಗಳಂತಿದ್ದ ಮೂರು ದುಷ್ಟಾತ್ಮಗಳನ್ನು ನಾನು ಕಂಡೆ. ಅವು ಘಟಸರ್ಪದ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಕಪಟ ಪ್ರವಾದಿಯ ಬಾಯೊಳಗಿಂದಲೂ ಹೊರಟುಬಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.