Revelation 16:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
Kannada BSI Bible 2016
ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)
Kannada Bible (KNCL) BSI 2016
“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”