Revelation 16:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.
Kannada BSI Bible 2016
ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.
Kannada Bible (KNCL) BSI 2016
ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.