Revelation 16:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
Kannada BSI Bible 2016
ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವಾಯಿತು; ಮನುಷ್ಯರು ಭೂವಿುಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಲಿಲ್ಲ.
Kannada Bible (KNCL) BSI 2016
ಆಗ ಮಿಂಚು, ಗುಡುಗು, ಗರ್ಜನೆಗಳುಂಟಾದವು. ಇದಲ್ಲದೆ, ಭಯಂಕರವಾದ ಭೂಕಂಪ ಉಂಟಾಯಿತು. ಮಾನವ ಇತಿಹಾಸದಲ್ಲೇ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.