Revelation 16:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪ ದ್ರವವು ಬಹಳ ಭೀಕರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.
Kannada BSI Bible 2016
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.
Kannada Bible (KNCL) BSI 2016
ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.