Revelation 16:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರವು ಸತ್ತ ಮನುಷ್ಯನ ರಕ್ತದಂತಾಯಿತು. ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲ ಸತ್ತುಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.
Kannada BSI Bible 2016
ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದನು. ಅದರ ನೀರು ಸತ್ತವನ ರಕ್ತದ ಹಾಗಾಯಿತು; ಮತ್ತು ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲವು ಸತ್ತುಹೋದವು.
Kannada Bible (KNCL) BSI 2016
ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರದ ನೀರು ಸತ್ತವನ ರಕ್ತದಂತೆ ಆಯಿತು. ಸಮುದ್ರದಲ್ಲಿದ್ದ ಜಲಜಂತುಗಳೆಲ್ಲಾ ಸತ್ತುಹೋದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಸಮುದ್ರದ ಮೇಲೆ ಸುರಿಯಲು, ಅದು ಸತ್ತ ಮನುಷ್ಯನ ರಕ್ತದಂತಾಯಿತು, ಸಕಲ ಜೀವಿಗಳೂ ಸತ್ತವು.