Revelation 16:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ನದಿಗಳು ಮತ್ತು ನೀರಿನ ಬುಗ್ಗೆಗಳೆಲ್ಲ ರಕ್ತವಾಗಿ ಪರಿಣಮಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.
Kannada BSI Bible 2016
ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
Kannada Bible (KNCL) BSI 2016
ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಸುರಿದನು. ನೀರೆಲ್ಲಾ ರಕ್ತಮಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು.