Revelation 16:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
Kannada BSI Bible 2016
ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಜಲಾಧಿಪತಿಯಾದ ದೂತನು - ಸದಾ ಇರುವಾತನೇ, ಪರಿಶುದ್ಧನೇ, ನೀನು ಹೀಗೆ ತೀರ್ಪುಮಾಡಿದ್ದರಲ್ಲಿ ನೀತಿಸ್ವರೂಪನಾಗಿದ್ದೀ.
Kannada Bible (KNCL) BSI 2016
ಆಗ ಜಲಾಧಿಕಾರಿಯಾದ ದೂತನು: “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ.