Revelation 16:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಜನರನ್ನು ಕಡುಬಿಸಿಲಿನಿಂದ ಕಂದಿಸುವ ಅಧಿಕಾರವನ್ನು ಸೂರ್ಯನಿಗೆ ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
Kannada BSI Bible 2016
ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ಕನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯ್ದನು; ಆಗ ಸೂರ್ಯನಿಗೆ ಕಡುಬಿಸಿಲಿನಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
Kannada Bible (KNCL) BSI 2016
ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ, ಕಡುಬಿಸಿಲಿನಿಂದ ಮನುಷ್ಯರನ್ನು ಸುಡುವ ಶಕ್ತಿಯನ್ನು ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ಕನೆಯ ದೇವದೂತನು ತನ್ನ ಬೋಗುಣಿಯೊಳಗಿರುವುದನ್ನು ಸೂರ್ಯನ ಮೇಲೆ ಸುರಿಯಲು, ಸೂರ್ಯನಿಗೆ ಮನುಷ್ಯರನ್ನು ಬೆಂಕಿಯಿಂದ ಕಂದಿಸುವ ಅಧಿಕಾರ ಕೊಡಲಾಯಿತು.