Revelation 17:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.
Kannada BSI Bible 2016
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡಿ - ಬಾ, ಬಹಳ ನೀರುಗಳ ಮೇಲೆ ವಾಸಿಸಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;
Kannada Bible (KNCL) BSI 2016
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.