Revelation 17:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.
Kannada BSI Bible 2016
ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸು; ಅವನು ಆ ಏಳು ಮಂದಿ ಅರಸುಗಳಿಗೆ ಸೇರಿದವನು; ನಾಶಕ್ಕೆ ಹೋಗುವನು.
Kannada Bible (KNCL) BSI 2016
ಹಿಂದೊಮ್ಮೆ ಇದ್ದು ಈಗ ಇಲ್ಲದಿರುವ ಮೃಗವು ಎಂಟನೆಯ ರಾಜನನ್ನು ಸೂಚಿಸುತ್ತದೆ. ಅದು ಆ ಏಳುಮಂದಿಗೆ ಸೇರಿದುದು ಮತ್ತು ವಿನಾಶದತ್ತ ತೆರಳುವಂಥಾದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಂದೆ ಇದ್ದು ಈಗ ಇಲ್ಲದ ಆ ಮೃಗವು ಎಂಟನೆಯವನು. ಅವನು ಆ ಏಳು ಜನರಲ್ಲಿ ಸೇರಿದವನಾಗಿದ್ದು, ವಿನಾಶಕ್ಕೆ ಹೋಗುತ್ತಿದ್ದಾನೆ.