Revelation 17:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
Kannada BSI Bible 2016
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕಂಡ ಆ ಹತ್ತು ಕೊಂಬುಗಳು ಅಂದರೆ ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ಅರಸುಗಳು. ಅವರು ಒಂದು ಗಳಿಗೆಯವರೆಗೆ ರಾಜರಂತೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುತ್ತಾರೆ.
Kannada Bible (KNCL) BSI 2016
“ನೀನು ಕಂಡ ಹತ್ತು ಕೊಂಬುಗಳು ಹತ್ತು ರಾಜರುಗಳನ್ನು ಸೂಚಿಸುತ್ತವೆ. ಅವರು ಇನ್ನೂ ರಾಜ್ಯಭಾರವನ್ನು ವಹಿಸಿಕೊಂಡಿಲ್ಲ. ಆ ಮೃಗದ ಜೊತೆಯಲ್ಲಿ ರಾಜ್ಯವಾಳಲು ಒಂದು ಗಂಟೆಯವರೆಗೆ ಅವರಿಗೆ ಅಧಿಕಾರವನ್ನು ಕೊಡಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಕಂಡ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಮೃಗದೊಂದಿಗೆ ಅಧಿಕಾರ ಹೊಂದುವವು.