Revelation 17:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
Kannada BSI Bible 2016
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.
Kannada Bible (KNCL) BSI 2016
ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”