Revelation 17:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.
Kannada BSI Bible 2016
ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.
Kannada Bible (KNCL) BSI 2016
ಆ ದೇವದೂತನು ಮುಂದುವರೆದು ಹೀಗೆ ನುಡಿದನು: “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ.