Revelation 17:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.
Kannada BSI Bible 2016
ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.
Kannada Bible (KNCL) BSI 2016
ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು.