Revelation 17:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
Kannada BSI Bible 2016
ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.
Kannada Bible (KNCL) BSI 2016
ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.