Revelation 17:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.
Kannada BSI Bible 2016
ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ಹಣೆಯ ಮೇಲೆ - ಬಾಬೆಲೆಂಬ ಮಹಾನಗರಿ, ಭೂವಿುಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ಕಾರ್ಯಗಳಿಗೂ ತಾಯಿ ಎಂದು ಗೂಢಾರ್ಥವುಳ್ಳ ಹೆಸರು ಬರೆದಿತ್ತು.
Kannada Bible (KNCL) BSI 2016
ಅವಳ ಹಣೆಯ ಮೇಲೆ: ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.