Revelation 17:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.
Kannada BSI Bible 2016
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.
Kannada Bible (KNCL) BSI 2016
ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.