Revelation 17:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
Kannada BSI Bible 2016
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.
Kannada Bible (KNCL) BSI 2016
ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.