Revelation 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇದನ್ನು ಅರ್ಥಮಾಡಿಕೊಳ್ಳಲು ನಿನಗೆ ಬುದ್ಧಿ ಬೇಕು. ಆ ಮೃಗದ ಏಳು ತಲೆಗಳೇ ಆ ಸ್ತ್ರೀಯು ಕುಳಿತುಕೊಳ್ಳುವ ಏಳು ಬೆಟ್ಟಗಳಾಗಿವೆ. ಅವು ಏಳು ಮಂದಿ ರಾಜರುಗಳೂ ಆಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.
Kannada BSI Bible 2016
ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಬುದ್ಧಿವಂತನಿಗೆ ಮಾತ್ರ ಗೊತ್ತಾಗುವದು. ಆ ಏಳು ತಲೆಗಳು ಆ ಸ್ತ್ರೀ ಕೂತುಕೊಂಡಿರುವ ಏಳು ಬೆಟ್ಟಗಳೇ;
Kannada Bible (KNCL) BSI 2016
“ಇದನ್ನು ಗ್ರಹಿಸಿಕೊಳ್ಳಲು ಬುದ್ಧಿ ಸಾಮರ್ಥ್ಯವಿರಬೇಕು. ಏಳು ತಲೆಗಳು ಆ ಸ್ತ್ರೀ ಕುಳಿತಿರುವ ಏಳು ಬೆಟ್ಟಗಳನ್ನೂ ಏಳು ರಾಜರನ್ನೂ ಸೂಚಿಸುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ಏಳು ತಲೆಗಳು, ಆ ಸ್ತ್ರೀ ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. ಅವು ಏಳು ರಾಜರುಗಳಾಗಿರುತ್ತವೆ.