Revelation 18:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.
Kannada BSI Bible 2016
ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.
Kannada Bible (KNCL) BSI 2016
ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.