Revelation 18:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಬಾಬಿಲೋನೇ, ನೀನು ಅಪೇಕ್ಷಿಸಿದ ಉತ್ತಮ ವಸ್ತುಗಳೆಲ್ಲವೂ ನಿನ್ನಿಂದ ಹೋಗಿಬಿಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’
Kannada BSI Bible 2016
ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲೇ, ನಿನ್ನ ಜೀವವು ಅಪೇಕ್ಷಿಸಿದ ಹಣ್ಣುಹಂಪಲುಗಳು ನಿನ್ನನ್ನು ಬಿಟ್ಟುಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವದೆಲ್ಲವೂ ನಾಶವಾಗಿ ನಿನ್ನನ್ನು ಬಿಟ್ಟುಬಿಟ್ಟವು. ಅವು ಇನ್ನು ಮೇಲೆ ಜನರಿಗೆ ಸಿಕ್ಕುವದೇ ಇಲ್ಲ.
Kannada Bible (KNCL) BSI 2016
“ಬಾಬಿಲೋನೇ, ನೀ ಹಂಬಲಿಸಿದ ಫಲ ನಿನ್ನಿಂದ ದೂರ ಸರಿಯಿತು ನಿನ್ನೆಲ್ಲ ವಿಲಾಸ ವೈಭವಗಳು ನಂದಿಹೋದವು ಮರಳಿ ಕಾಣವವು ಇನ್ನೆಂದಿಗೂ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು.