Revelation 18:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ,
Kannada BSI Bible 2016
ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ಅವಳ ಯಾತನೆಯನ್ನು ನೋಡಿ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ದುಃಖಿಸುತ್ತಾ -
Kannada Bible (KNCL) BSI 2016
ವ್ಯಾಪಾರ ಮಾಡಿ ಅವಳಿಂದ ಧನಿಕರಾದ ವರ್ತಕರು ಅವಳಿಗುಂಟಾದ ಚಿತ್ರಹಿಂಸೆಯನ್ನು ದೂರದಲ್ಲಿ ನಿಂತು ನೋಡಿ, ಭಯಭ್ರಾಂತರಾಗಿ ಅವಳನ್ನುದ್ದೇಶಿಸಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯಿಂದ ಸಿರಿವಂತರಾದ ಆ ಸರಕುಗಳ ವರ್ತಕರು ದೂರದಲ್ಲಿ ನಿಂತು ಆಕೆಯ ಯಾತನೆಯ ದೆಸೆಯಿಂದ ಭಯಪಟ್ಟು, ದುಃಖಿಸಿ,