Revelation 18:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’
Kannada BSI Bible 2016
ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಅಯ್ಯೋ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾ ಪಟ್ಟಣಕ್ಕೆ ಏನು ದುರ್ಗತಿ ಸಂಭವಿಸಿತು.
Kannada Bible (KNCL) BSI 2016
“ಅಯ್ಯೋ! ಅಯ್ಯೋ! ಮಹಾನಗರಿ ನಿನಗೆಂಥಾ ದುರ್ಗತಿ! ಕೆನ್ನೀಲಿಯ ಕಡುಗೆಂಪಿನ ನಯವಸ್ತ್ರಗಳನುಟ್ಟವಳೇ, ಹೊನ್ನ ತೊಟ್ಟವಳೇ, ಮತ್ತು ರತ್ನಾಭರಣಗಳನು ಧರಿಸಿದವಳೇ, ತಾಸೊಂದರಲೇ ನಿನ್ನ ಐಸಿರಿಯೆಲ್ಲಾ ವ್ಯರ್ಥವಾಯಿತೇ!” ಎಂದು ದುಃಖಿಸಿ ಅತ್ತು ಗೋಳಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ.