Revelation 18:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.
Kannada BSI Bible 2016
ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಹೊಯಿದುಕೊಂಡು ಅಳುತ್ತಾ ಗೋಳಾಡುತ್ತಾ - ಅಯ್ಯೋ, ಅಯ್ಯೋ, ಸಮುದ್ರದ ಮೇಲೆ ಹಡಗುಳ್ಳವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಈ ಮಹಾ ಪಟ್ಟಣಕ್ಕೆ ಎಂಥಾ ಗತಿ ಬಂತು; ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಕೂಗಿ ಹೇಳಿದರು.
Kannada Bible (KNCL) BSI 2016
ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ: “ನಿನಗೆಂಥಾ ದುರ್ಗತಿ, ಓ ಮಹಾನಗರಿ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ!” ಎಂದು ಪರಿತಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’