Revelation 18:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕವೇ, ಇದರಿಂದ ನೀನೂ ಸಂತೋಷಪಡು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.
Kannada BSI Bible 2016
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.
Kannada Bible (KNCL) BSI 2016
“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”