Revelation 18:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.
Kannada BSI Bible 2016
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
Kannada Bible (KNCL) BSI 2016
ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು: “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು.