Revelation 18:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.
Kannada BSI Bible 2016
ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲೇ, ನಿನ್ನಲ್ಲಿ ವೀಣೆಗಾರರೂ ವಾದ್ಯಗಾರರೂ ಕೊಳಲೂದುವವರೂ ತುತೂರಿಯವರೂ ಮಾಡುವ ಧ್ವನಿಯು ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿನ್ನಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
Kannada Bible (KNCL) BSI 2016
“ಎಲೈ ಬಾಬಿಲೋನೇ, ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, ಸಂಗೀತಗಾರರು, ಕೊಳಲೂದುವವರು, ತುತೂರಿಯವರು, ಮಾಡುವ ಧ್ವನಿ ಎಂದೂ ಕೇಳಿಸದು. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಎಂದೂ ಕಂಡುಬಾರನು. ಬೀಸುವ ಕಲ್ಲಿನ ಶಬ್ದವು, ನಿನ್ನಲ್ಲಿ ಎಂದೂ ಕೇಳಿಸದು.