Revelation 18:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.
Kannada BSI Bible 2016
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಕಾಣಿಸುವದಿಲ್ಲ. ವಧೂವರರ ಸ್ವರವು ಇನ್ನೆಂದಿಗೂ ಕೇಳಿಸುವದಿಲ್ಲ. ನಿನ್ನ ವರ್ತಕರು ಭೂವಿುಯ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದಿಂದ ಎಲ್ಲಾ ಜನಾಂಗದವರು ಮರುಳಾದರು.
Kannada Bible (KNCL) BSI 2016
“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.