Revelation 18:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.
Kannada BSI Bible 2016
ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.
Kannada Bible (KNCL) BSI 2016
ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು: ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’