Revelation 18:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವಳಿಗೆ ಮರಣ, ಗೋಳಾಟ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.
Kannada BSI Bible 2016
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳುವದರಿಂದ ಅವಳಿಗೆ ಕೊಲೆ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿಸುವವು; ಅವಳು ಬೆಂಕಿಯಿಂದ ಸುಟ್ಟುಹೋಗುವಳು; ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ;
Kannada Bible (KNCL) BSI 2016
ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”