Revelation 18:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.
Kannada BSI Bible 2016
ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾಗಿ ಬದುಕಿದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡುವಾಗ ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ಎದೆ ಬಡುಕೊಳ್ಳುತ್ತಾ -
Kannada Bible (KNCL) BSI 2016
ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.