Revelation 19:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.
Kannada BSI Bible 2016
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;
Kannada Bible (KNCL) BSI 2016
ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!