Revelation 19:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.
Kannada BSI Bible 2016
ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಕಣ್ಣುಗಳು ಬೆಂಕಿಯ ಉರಿಯಂತಿವೆ; ಆತನ ತಲೆಯ ಮೇಲೆ ಅನೇಕ ಮಕುಟಗಳುಂಟು; ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.
Kannada Bible (KNCL) BSI 2016
ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.