Revelation 19:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.
Kannada BSI Bible 2016
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿರುವ ಸೈನ್ಯದವರು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನ ಹಿಂದೆ ಬರುತ್ತಿದ್ದರು.
Kannada Bible (KNCL) BSI 2016
ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು.