Revelation 19:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಒಬ್ಬ ದೇವದೂತನು ಸೂರ್ಯನ ಮೇಲೆ ನಿಂತಿರುವುದನ್ನು ನಾನು ನೋಡಿದೆನು. ಆ ದೇವದೂತನು ಆಕಾಶದಲ್ಲಿ ಹಾರುತ್ತಿರುವ ಹಕ್ಕಿಗಳಿಗೆಲ್ಲ ಹೀಗೆ ಹೇಳುತ್ತಿದ್ದನು: “ದೇವರ ಮಹಾಭೋಜನಕ್ಕೆ ಒಟ್ಟುಗೂಡಿ ಬನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,
Kannada BSI Bible 2016
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವದನ್ನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ - ಬನ್ನಿರಿ, ದೇವರು ಮಾಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ,
Kannada Bible (KNCL) BSI 2016
ಅನಂತರ ದೇವದೂತನೊಬ್ಬ ಸೂರ್ಯನ ಮೇಲೆ ನಿಂತಿರುವುದನ್ನು ಕಂಡೆ. ಆತನು ಗಟ್ಟಿಯಾದ ಧ್ವನಿಯಿಂದ ಮಧ್ಯಾಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಹೀಗೆ ಹೇಳಿದನು: “ದೇವರ ದೊಡ್ಡ ಔತಣಕ್ಕೆ ಕೂಡಿಬನ್ನಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾಧ್ವನಿಯಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಏರ್ಪಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ.