Revelation 19:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.
Kannada BSI Bible 2016
ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
Kannada Bible (KNCL) BSI 2016
ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.