Revelation 19:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.
Kannada BSI Bible 2016
ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು.
Kannada Bible (KNCL) BSI 2016
ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.