Revelation 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.
Kannada BSI Bible 2016
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;
Kannada Bible (KNCL) BSI 2016
ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು: “ಅಲ್ಲೆಲೂಯ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.